ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿ.25) ಭಾನುವಾರ ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಡಿ.25ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ ಸಂಜೆ 4 ಗಂಟೆಗೆ ಮಂಗಳೂರು ತಲುಪುವರು. ಸಂಜೆ 4.10ಕ್ಕೆ ಮಂಗಳೂರಿನಿಂದ ಹೊರಟು 5 ಗಂಟೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಜಾಂಬೂರಿ ಹಾಗೂ ಏಕ್ ಭಾರತ್-ಶ್ರೇಷ್ಠ ಭಾರತ್, ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ, ಸಂಸ್ಕೃತಿಯಿಂದ ಯುವಜನರ ಒಗ್ಗಟ್ಟು ಕಾರ್ಯಕ್ರಮದ ಅನಾವರಣ ಮಾಡುವರು. ರಾತ್ರಿ 8 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 9 ಗಂಟೆಗೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಲೋಕಸಭಾ ಚುನಾವಣೆಯ ಅವಧಿಯಲ್ಲಿ ಅಮಾನತಿನಲ್ಲಿರಿಸಿದ ಆಯುಧಗಳ ಬಿಡುಗಡೆಗೆ ಆದೇಶ

error: Content is protected !!
Scroll to Top