ಡಿ. 26ರಂದು ಪಿಲಿಕುಳದ ಎಲ್ಲಾ ವಿಭಾಗಗಳು ಸಾರ್ವಜನಿಕರ ವೀಕ್ಷಣೆಗೆ ಅವಕಾಶ

pilikula

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಅಂತಾರಾಷ್ಟ್ರೀಯ ಸ್ಕೌಟ್ಸ್& ಗೈಡ್ಸ್, ಸಾಂಸ್ಕೃತಿಕ ಜಾಂಬೂರಿ ಪ್ರಯುಕ್ತ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳು ಡಿ. 26ರ ಸೋಮವಾರದಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತವೆ.

ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಪ್ರಕಟಣೆ ತಿಳಿಸಿದೆ.

Scroll to Top