ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ

(ನ್ಯೂಸ್ ಕಡಬ) newskadaba.com ಭೋಜ್‌ಪುರ, ಡಿ. 24. ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.

 

ಭೋಜ್‌ಪುರದ ಚಾಂಡಿ ಗ್ರಾಮದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಆಟದಲ್ಲಿ ಜಯಗಳಿಸಿದ ಗುಂಪೊಂದು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ಈ ವೀಡಿಯೋ ಇದೀಗ ವೈರಲ್ ಆಗಿದೆ. ವೀಡಿಯೋದಲ್ಲಿ ಟ್ರೋಫಿಯನ್ನು ಇಬ್ಬರು ಹಿಡಿದುಕೊಂಡಿದ್ದು, ಕೆಲವು ಯುವಕರು ಪಾಕ್ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ವೀಡಿಯೋವನ್ನು ಸಾಕ್ಷ್ಯವಾಗಿಟ್ಟುಕೊಂಡು ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಘೋಷಣೆ ಕೂಗಿದ ಇತರರ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ ➤ ಕೇಂದ್ರ ಸರ್ಕಾರ

 

error: Content is protected !!
Scroll to Top