ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆಯೇ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶೀ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ.

ಪ್ರತೀ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕರೋನ ಪರೀಕ್ಷೆಗೆ ಒಳಪಡುತ್ತಾರೆ. ಪ್ರತಿ ವಿಮಾನದಲ್ಲಿ ಅಂತಹ ಪ್ರಯಾಣಿಕರನ್ನು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳು ಗುರುತಿಸುತ್ತವೆ. ಕೊರೋನಾ ಮಾದರಿಯನ್ನು ಸಲ್ಲಿಸಿದ ನಂತರವೇ, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಪ್ರವೇಶದ ಸ್ಥಳದಲ್ಲಿ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಈ ಸಮಯದಲ್ಲಿ ರೋಗಲಕ್ಷಣಗಳು ಕಂಡುಬಂದರೆ ತಕ್ಷಣವೇ ಪ್ರತ್ಯೇಕಿಸಲಾಗುತ್ತದೆ ಎನ್ನಲಾಗಿದೆ.

Also Read  ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ

error: Content is protected !!
Scroll to Top