(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 25. ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಬೆನ್ನಲ್ಲೇ ಪಣಂಬೂರು, ಬಜ್ಪೆ, ಕಾವೂರು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಕಮಿಷನರ್ ಆದೇಶಿಸಿದ್ದಾರೆ.
ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಈ ನಿಷೇಧಾಜ್ಞೆ ಕ್ರಿಸ್ ಮಸ್ ಆಚರಣೆ, ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.