ಕಾಡಾನೆ ದಾಳಿ- ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 25. ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ನಡೆದಿದೆ.

ಮೃತ ರೈತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಕಾಡಾನೆ ದಾಳಿಗೆ ರೈತ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ

error: Content is protected !!
Scroll to Top