ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 25. ಸ್ಕೂಟರ್ ಹಾಗೂ ‌ಗೂಡ್ಸ್ ವಾಹನ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಭಾನುವಾರದಂದು ನಡೆದಿದೆ.








ಮೃತಪಟ್ಟವರನ್ನು ಚಾರ್ಮಾಡಿ ನಿವಾಸಿ ಪುರುಷೋತ್ತಮ‌ ಪೂಜಾರಿ(20) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ದ ದಿಕ್ಕಿನಿಂದ ಬಂದ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top