1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರೂ. ನಕಲಿ ನೋಟುಗಳನ್ನು ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಮುನ್ನಾ ಶರಣ್, ವಿಷ್ಣುರಾಜನ್ ಆರ್ ಹಾಗೂ ರಾಮಮೂರ್ತಿನಗರದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಲಕ್ಷ್ಮಣ್ ರಾವ್, ತುಷಾರ್ ಮತ್ತು  ಆಶಾಲತಾ  ರಾವ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.  ರಾಜರಾಜೇಶ್ವರಿ ನಗರದ ಐಡಿಯಲ್‌ ಹೋಮ್ಸ್‌ ಟೌನ್‌ ನಿವಾಸಿ ಎನ್‌ ಪಾರ್ಥಸಾರಥಿ ಅವರು 2017ರಲ್ಲಿ ಬಾಣಸವಾಡಿಯ ಸಂಸ್ಥೆಯೊಂದರಲ್ಲಿ ಬಂಡವಾಳ ಹೂಡಲು ಆಸ್ತಿಯನ್ನು ಅಡವಿಟ್ಟು ಸುಮಾರು 1.75 ಕೋಟಿ ರೂಪಾಯಿ ಸಾಲ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Also Read  ರೈತರಿಗೆ ಗುಡ್ ನ್ಯೂಸ್➤ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ನಿರ್ಧರಿಸಿದ ಸರ್ಕಾರ

 

error: Content is protected !!
Scroll to Top