ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ.

ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ಪಿಎಸ್‌ಐ ಆರತಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

Also Read  ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ

error: Content is protected !!
Scroll to Top