ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷಾಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.  ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. ಐಎಲ್ಐ ಮತ್ತು ಸಾರಿ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಕಡ್ಡಾಯ ಪರೀಕ್ಷೆಗಳನ್ನು ಸಹ ಅಧಿಕಾರಿಗಳು ಸೂಚಿಸಿದ್ದಾರೆ.

Also Read  ಶತಾಯುಷಿ ಕೆಮ್ಮಾರ ಇಸ್ಮಾಯಿಲ್ ಹಾಜಿ ವಿಧಿವಶ

 

error: Content is protected !!
Scroll to Top