ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಕ್ವೆ ಎಂಬಲ್ಲಿ ನಡೆದಿದೆ.







ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಕೊಳಾಲ ಗ್ರಾಮದ ಹೆಗದಿಹಳ್ಳ ನಿವಾಸಿ ವೀರೇಶ ಎಂದು ಗುರುತಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿರುವ ವೀರೇಶ್ ಹಾಗೂ ರೆವನೀಶ್ ಎಂಬವರು ಇಲ್ಲಿನ ನರಿಮೊಗರು ಬಾಲಕೃಷ್ಣ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಇವರಿಗೆ ವಿರುದ್ದ ದಿಕ್ಕಿನಿಂದ ಬಂದ ಆಟೋ ರಿಕ್ಷಾ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರರು ರಸ್ತೆಗೆಸೆಯಲ್ಪಟ್ಟು, ವೀರೇಶ್ ಎಂಬವರು ಗಂಭೀರ ಗಾಯಗೊಂಡಿದ್ದರು‌. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ‌. ಈ ಕುರಿತು ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top