(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿದ್ದು, ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.
ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ದಕ್ಷಿಣದ ರಾಜ್ಯಗಳಲ್ಲಿ, ತಮಿಳುನಾಡಿನಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ನಂತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಿವೆ. ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು 2020 ರಲ್ಲಿ 98,278 ರಿಂದ, 2022 ರಲ್ಲಿ 1,03,371 ಕ್ಕೆ ಏರಿದೆ. ಇದು ಶೇಕಡಾ 5.2 ರ ಏರಿಕೆಯನ್ನು ಕಂಡಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ನ್ಯಾಷನಲ್ ಕ್ಯಾನ್ಸರ್ ರಿಜಿಸ್ಟ್ರಿ ಪ್ರೋಗ್ರಾಂ (ICMR-NCRP) ನ ಅಂಕಿಅಂಶಗಳಿಂದ ಇದು ಪತ್ತೆಯಾಗಿದೆ.