ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                               

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆಯಿದ್ದು, ಈ ಸಭೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರು ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಹೊಸ ಮಾರ್ಗಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದರು. ಕೇಂದ್ರದಿಂದಲೂ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳು ಬಂದಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದೆ. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಿದ್ದು, ಬೇರೆ ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಿದ ನಂತರ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚೆರಿಕೆಯಾಗಿ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

Also Read  ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ

error: Content is protected !!
Scroll to Top