ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                              

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ತಾಲೂಕಿನ ಕಟ್ನವಾಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಕಬ್ಬು ಬೆಳೆಗಾರ ಗುರು ಎಂಬವರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಮರಿಗಳು ಪತ್ತೆಯಾಗಿದೆ.

ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ ಗುರು, ಚಿರತೆ ಮರಿಗಳನ್ನು ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ತನ್ನ ಮರಿಗಳನ್ನು ಹುಡುಕಿಕೊಂಡು ತಾಯಿ ಚಿರತೆ ಎರಡು-ಮೂರು ದಿನಗಳಲ್ಲಿ ಕಬ್ಬಿನ ಗದ್ದೆಗೆ ವಾಪಸ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಲಾಖೆಯು ಕ್ಯಾಮರಾ ಟ್ರ್ಯಾಪ್ ಅಳವಡಿಸಿದೆ ಎಂದು ತಿಳಿದುಬಂದಿದೆ.

Also Read  ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

error: Content is protected !!
Scroll to Top