ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 26. ಯುವತಿ ಮದುವೆಗೆ ನಿರಾಕರಿಸಿದಳೆಂದು ಯುವಕನೋರ್ವ ಹುಡುಗಿಯ ಕಪಾಳಕ್ಕೆ ಹೊಡೆದು ಕೂದಲನ್ನು ಹಿಡಿದೆಳೆದು ನೆಲಕ್ಕೆ ನೂಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು 24 ವರ್ಷದ ಪಂಕಜ್​ ತ್ರಿಪಾಠಿ ದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗಲು ಯುವತಿ ನಿರಾಕರಿಸಿದ್ದಕ್ಕೆ ಆತ ಹೀಗೆ ಕ್ರೂರವಾಗಿ ಹಲ್ಲೆ ನಡೆಸಿದ್ಧಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದು, ಮಿರ್ಜಾಪುರದಲ್ಲಿ ಆತನನ್ನು ಪೊಲೀಸರು ಬಂಧಿಸಿದಲ್ಲದೇ ಅವನ ಮನೆಯನ್ನು ನೆಲಸಮಗೊಳಿಸಿದ್ದಾರೆ ಎನ್ನಲಾಗಿದೆ.

Also Read  ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!!

ಅಲ್ಲದೆ ಡ್ರೈವರ್​ ವೃತ್ತಿಯಲ್ಲಿದ್ದ ಆರೋಪಿಯ ಡ್ರೈವಿಂಗ್ ಲೈಸನ್ಸ್ ಅನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳ್ಳದ ಸ್ಥಳೀಯ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!
Scroll to Top