ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನೆಂಬುವುದನ್ನು ಪೂರ್ಣ ತನಿಖೆಯ ಬಳಿಕವೇ ಹೇಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Also Read  ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

error: Content is protected !!
Scroll to Top