(ನ್ಯೂಸ್ ಕಡಬ) newskadaba.com ಕಡಬ, ಡಿ.01. ವಿದ್ಯಾರ್ಥಿಗಳಲ್ಲಿ ಸೃಜನ ಶೀಲತೆ ಹಾಗೂ ಕ್ರಿಯಾತ್ಮಕ ಕಲಿಕೆಯ ಅಭಿರುಚಿ ಬೆಳೆಸುವ ಹಾಗೂ ಪರಿಸರದ ವಿದ್ಯಾಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯವನ್ನು ವೃದ್ಧಿಸುವ ಉದ್ದೇಶದೊಂದಿಗೆ ಬೆಂಗಳೂರಿನ ‘ವೈಎಫ್‌ಎಸ್’ ಸಿಸ್ಕೋ ಸಂಭ್ರಮ ತಂಡದ ಸಹಯೋಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯ ಆಶ್ರಯದಲ್ಲಿ ಆಹ್ವಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ವೈವಿಧ್ಯಮ ಸ್ಪರ್ಧೆಗಳ ‘ಅಕ್ಷರ ಹಬ್ಬ – 2017’ ಡಿಸೆಂಬರ್ 03 ಭಾನುವಾರದಂದು ಶ್ರೀ ರಾಮಕುಂಜೇಶ್ವರ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ತಿಳಿಸಿದ್ದಾರೆ.
ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ವಿಶೇಷ ಸ್ಪರ್ಧೆಗಳು, ತ್ರೀ-ಡಿ ಶೋ, ವಿಜ್ಞಾನ ಮಾದರಿ ಪ್ರದರ್ಶನಗಳಿರಲಿದ್ದು, ಬೆಂಗಳೂರಿನ ಸಿಸ್ಕೋ ತಂಡದಿಂದ ವಿವಿಧ ಚಟುವಟಿಕೆಗಳು ನಡೆಯಲಿವೆ. ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಕ್ಯಾಂಪ್ಕೋ ಉತ್ಪನ್ನಗಳ ಪ್ರದರ್ಶನ ಹಾಗೂ ಪುತ್ತೂರಿನ ಜ್ಞಾನಗಂಗಾ ಪುಸ್ತಕ ಮಳಿಗೆಯವರಿಂದ ಪುಸ್ತಕ ಪ್ರದರ್ಶನವು ಅಕ್ಷರ ಹಬ್ಬದಲ್ಲಿ ಇರಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಉದ್ಘಾಟಿಸಲಿದ್ದು, ತಾ.ಪಂ. ಸಾಮಾಜಿಕ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಗೌಡ ಬಜತ್ತೂರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋಳಿತೊಟ್ಟು ಗ್ರಾ.ಪಂ. ಉಪಾಧ್ಯಕ್ಷ ಪ್ರಸಾದ್ ಕೆ.ಪಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಮುರಳಿಕೃಷ್ಣ ಬಡಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ನಿಂಗರಾಜು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದರು.