ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಇಂದು ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ನಾಯಕರನ್ನು ಭೇಟಿ ಮಾಡಿ ವಿಧಾನಸಭೆ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ. ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರಗಳ ಮೇಲೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಮಧ್ಯಾಹ್ನ ದೆಹಲಿಗೆ ತೆರಳಿ ಎಲ್ಲದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಬಾರಿ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ. ಸಾಧ್ಯವಾದರೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

Also Read  ಮಂಗಳೂರು: ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಿಸಲು ಜಿಲ್ಲಾಧಿಕಾರಿ ಸೂಚನೆ

error: Content is protected !!
Scroll to Top