10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                   

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

 

ಬಂಧಿತ ಶಿಕ್ಷಕನನ್ನು ಬಿ.ಆರ್. ಬಾಡಕರ ಹಾಗೂ ಆತನಿಗೆ ಸಹಾಯ ಮಾಡಿದ್ದ ಮತ್ತೊಬ್ಬ ಶಿಕ್ಷಕ ಕೆ.ಎಂ. ಕೋಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯು ಶಾಲಾ ಆವರಣದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು. ಈ ಸಂಬಂಧ ಬಾಲಕಿಯು  ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ತಮ್ಮ ಮೇಲೆ ಹಲ್ಲೆ ನಡೆಸಿರುವ ಕುರಿತು ಯಾರಿಗಾದರೂ ಹೇಳಿದರೆ ಆಕೆಯ ಅಂಕಗಳನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಸಂಕೇಶ್ವರಪ್ಪ ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 354 (ಎ) 109 (ಪ್ರಚೋದನೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಎನ್ನಲಾಗಿದೆ.

Also Read  ಕಡಬ: ಬೈಕ್ ಅಪಘಾತ - ಶಾಲಾ ವಿದ್ಯಾರ್ಥಿ ಮೃತ್ಯು

 

 

error: Content is protected !!
Scroll to Top