ಕೇರಳದಲ್ಲಿ ವ್ಯಾಪಿಸಿದ ಪಕ್ಷಿ ಜ್ವರ ➤ 6000 ಕ್ಕೂ ಹೆಚ್ಚಿನ ಪಕ್ಷಿಗಳು ನಾಶ

(ನ್ಯೂಸ್ ಕಡಬ) newskadaba.com  ಕೊಟ್ಟಾಯಂ, ಡಿ.26. ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ಧೃಢಪಟ್ಟಿದ್ದು, ಈ ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ಈ ಪೈಕಿ ಬಾತುಕೋಳಿಗಳೇ ಹೆಚ್ಚಿವೆ ಎಂದು ವರದಿ ತಿಳಿಸಿದೆ. ಈ ನಾಶವು ವೆಚೂರ್, ನೀಂದೂರು ಮತ್ತು ಅರ್ಪೂಕರ ಪಂಚಾಯತಿ ವ್ಯಾಪ್ತಿಗಳಿಂದ ವರದಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ವೆಚೂರು ಪಂಚಾಯಿತಿ ವ್ಯಾಪ್ತಿಯಲ್ಲಿ 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರ್ ಪಂಚಾಯಿತಿ ವ್ಯಾಪ್ತಿಯಲ್ಲಿ 2,753 ಬಾತುಕೋಳಿಗಳು ಹಾಗೂ  ಅರ್ಪೂಕರ ಮಂಚಾಯಿತಿ ವ್ಯಾಪ್ತಿಯಲ್ಲಿ 2,975 ಬಾತುಕೋಳಿಗಳನ್ನು ನಾಶಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇದಕ್ಕೂ ಮುನ್ನ ಅಕ್ಟೋಬರ್ ತಿಂಗಳಲ್ಲಿ ಹರಿಪಾದ್ ಪ್ರದೇಶದಲ್ಲಿ ಹಕ್ಕಿ ಜ್ವರ ಹರಡಿದ್ದರಿಂದ ಅಲಪ್ಪುಳ ಜಿಲ್ಲಾಡಳಿತವು 20,000 ಪಕ್ಷಿಗಳನ್ನು ನಾಶಗೊಳಿಸಲಾಗಿತ್ತು. ರೈತರು ಸುಮಾರು 1500 ಬಾತುಕೋಳಿಗಳನ್ನು ಕಳೆದುಕೊಂಡಿದ್ದರಿಂದಾಗಿ ಜಿಲ್ಲಾಡಳಿತ ಇಂತಹ ಕ್ರಮಕ್ಕೆ ಮುಂದಾಗಿತ್ತು ಎನ್ನಲಾಗಿದೆ.

 

error: Content is protected !!

Join the Group

Join WhatsApp Group