(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಪೊಲೀಸ್ ಬಸ್ ಹಾಗೂ ಮೀನು ಸಾಗಾಟ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಗರದ ಪಂಪುವೆಲ್ ಬಳಿ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಬರುತ್ತಿದ್ದ ಪೊಲೀಸ್ ಬಸ್ ಹಾಗೂ ಮಂಗಳೂರಿನಿಂದ ಕೇರಳ ಕಡೆ ತೆರಳುತ್ತಿದ್ದ ಮೀನಿನ ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಪೊಲೀಸ್ ಬಸ್ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಹಲವು ಪೊಲೀಸರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
Also Read ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್
ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.