ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು           

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.26. ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.  ಮೃತಪಟ್ಟವರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.  ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Also Read  ಮಂಗಳೂರು: ಶ್ರೀನಿವಾಸ್ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರ

 

error: Content is protected !!
Scroll to Top