(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.26. ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಉಂಟುಮಾಡಿದೆ. ಮತ್ತೇ 2020-21 ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸೇರಿದಂತೆ ಕೇಂದ್ರ ಸರ್ಕಾರ ಕೂಡ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಕೋವಿಡ್ ನಿರ್ವಹಣಾ ಸಮಿತಿ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.