ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ➤ ಡಿ. 29ರವರೆಗೆ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಸುರತ್ಕಲ್‌ನಲ್ಲಿ ಉದ್ಯಮಿ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ.

ಡಿ. 24ರಂದು ರಾತ್ರಿ ಜಲೀಲ್ ಎಂಬವರನ್ನು ದುಷ್ಕರ್ಮಿಗಳು ಕತ್ತಿಯಿಂದ ಇರಿದು ಕೊಲೆಗೈದಿದ್ದ ಹಿನ್ನೆಲೆ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿ. 27ರ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಹಾರಿ ಮಾಡಲಾಗಿತ್ತು. ಆದರೆ ಇದೀಗ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಲಾಗಿದೆ. ಇನ್ನು ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಾಣಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಲಾಗಿದೆ. ಡಿಸೆಂಬರ್ 27ರಂದು ಬೆಳಗ್ಗೆ 10 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಕೂಡಾ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read  ಸುರತ್ಕಲ್: ಕಾರ್ಮಿಕರ ನಡುವೆ ಹೊಡೆದಾಟ     ➤  ಓರ್ವ ಮೃತ್ಯು.!

error: Content is protected !!
Scroll to Top