ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ.


ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Also Read  ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ

error: Content is protected !!
Scroll to Top