ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು ಅಂಗಡಿ ಮಾಲಕರು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Also Read  ‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ - ಪತಿ ಆತ್ಮಹತ್ಯೆ

error: Content is protected !!
Scroll to Top