ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ        



(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 27. ಖಾಸಗಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.







ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.






 

error: Content is protected !!
Scroll to Top