ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಡಿ. 27. ಒಂದು ವರ್ಷದ ಹೆಣ್ಣು ಮಗುವಿನ ಗಂಟಲಲ್ಲಿ ಚಾಕಲೇಟ್ ಸಿಲುಕಿ‌ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ವರದಿಯಾಗಿದೆ.

ಮೃತಪಟ್ಟ ಮಗುವನ್ನು ಶಾರ್ವರಿ ಸುಧೀರ್ ಜಾಧವ್ ಎಂದು ಗುರುತಿಸಲಾಗಿದೆ. ಮಗು ಚಾಕೊಲೇಟ್​ ನುಂಗಿ ಒದ್ದಾಡಿ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಇದನ್ನು ಕಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

 

Scroll to Top