ಪರಿಶಿಷ್ಟ ಜಾತಿ ಜನಾಂಗದ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) bewskadaba.com ಮಂಗಳೂರು, ಡಿ. 27. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನಾಂಗದ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ.

ಉದ್ಯಮಶೀಲತಾ ಅಭಿವೃಧ್ಧಿ ಯೋಜನೆ (ದ್ವಿಚಕ್ರ  ಹಾಗೂ ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿ), ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಅರ್ಜಿ ಸೇವಾಸಿಂಧು ಪೋರ್ಟಲ್‍ ನಲ್ಲಿ ಲಭ್ಯವಿದ್ದು, ಫಲಾನುಭವಿಗಳು ‘ಗ್ರಾಮ ಒನ್’ ಅಥವಾ ‘ಮಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‍ಸೈಟ್ ವಿಳಾಸ: https://sevasindhu.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಹರು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ ಅಥವಾ ಎಸ್.ಟಿ ಸಹಾಯವಾಣಿ 9482300400 ಮೂಲಕ ಮಾಹಿತಿ ಪಡೆಯಬಹುದಾಗಿದೆ. ಈಗಾಗಲೇ ಸುವಿಧಾ ಪೋರ್ಟಲ್‍ ನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಜಿ.ಎಚ್.ಎಸ್ ರೋಡ್ ಮಂಗಳೂರು. ದೂ.ಸಂಖ್ಯೆ: 0824-2951814 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group