ಸೈಕಲ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು



(ನ್ಯೂಸ್ ಕಡಬ) bewskadaba.com ಕಾರ್ಕಳ, ಡಿ. 27. ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯಲ್ಲಿ ನಡೆದಿದೆ.







ಮೃತ ಕಾರ್ಮಿಕನನ್ನು ಸುಜಿತ್ (23) ಎಂದು ಗುರುತಿಸಲಾಗಿದೆ. ಸಚ್ಚರಿಪೇಟೆಯ ತೋಟವೊಂದರಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು, ಕಳೆದ ಡಿ. 12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಸೈಕಲ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top