(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ವರದಿಯಾಗಿದೆ.
ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯನ್ನು ಸೆರೆ ಹಿಡಿದರು. ಸೆರೆಯಾದ ಚಿರತೆಗೆ ಸುಮಾರು 8 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆರ್ಎಫ್ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸೆರೆಯಾದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.