(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಸಿಲಿಕಾನ್ ಸಿಟಿಯ 30ಕ್ಕಿಂತ ಹೆಚ್ಚು ಆಸನವಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್ ಮಾಡುವಂತೆ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದ್ದು, ಇದು ಹೊಟೆಲ್ ಮಾಲೀಕರ ವಿರೋಧಕ್ಕೆ ಕಾರಣವಾಗಿದೆ. ಧೂಮಪಾನ ಮತ್ತು ಮಧ್ಯಪಾನ ಕೆಟ್ಟದ್ದು ಎಂದು ಗೊತ್ತಿದ್ದರೂ ಸಹ ಇಂದಿನ ಯುವಜನತೆ ಇದರ ದಾಸ್ಯಕ್ಕೆ ಒಳಗಾಗಿ ತಮ್ಮ ಜೀವನವನ್ನು ತಾವೇ ಕೈಯಾರೆ ಹಾಳು ಮಾಡಿಕೊಳ್ಳುತ್ತಿದ್ದಾರೆ.
ಧೂಮಪಾನ ನಿಯಂತ್ರಣಕ್ಕಾಗಿ ಇದೀಗ ಬಿಬಿಎಂಪಿ ಹೊಸ ಪ್ಲ್ಯಾನ್ ಮಾಡಿದ್ದು, ಇನ್ಮುಂದೆ ಬೆಂಗಳೂರಿನ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್ ಕಡ್ಡಾಯ ಮಾಡಬೇಕೆಂದು ಆದೇಶ ನೀಡಿದೆ. ಹೋಟೆಲ್ ಗೆ ಎಂಟ್ರಿ ಕೊಡುವವರು ಇನ್ಮುಂದೆ ಯಾವುದೇ ಕಾರಣಕ್ಕೂ ಎಲ್ಲೆಂದರಲ್ಲಿ ಸ್ಮೋಕ್ ಮಾಡುವಂತಿಲ್ಲ. ಇದನ್ನು ಕಡಿವಾಣ ಹಾಕುವ ಉದ್ದೇಶದಿಂದ ಹೋಟೆಲ್‌ನವರಿಗೆ ಹೇಳೋದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಇದೀಗ ಬಿಬಿಎಂಪಿ ಬೆಂಗಳೂರಿನ ಹೋಟೆಲ್‌ಗಳಿಗೆ ಈ ನೋಟಿಸ್ ನೀಡಿದ್ದು, ಹೊಸ ನಿಯಮವನ್ನು ಜಾರಿಗೆ ತಂದಿದೆ.