(ನ್ಯೂಸ್ ಕಡಬ) newskadaba.com, ಬೆಂಗಳೂರು, ಡಿ. 27. ಬೆಂಗಳೂರು: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿಗಳು ದ್ವಿಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಬರುವ ಶೈಕ್ಷಣಿಕ ವರ್ಷ 2023ದಿಂದ ಇದನ್ನು ಅಳವಡಿಸಲು ನಿರ್ಧರಿಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್ ಕಾಮ್ ವರದಿ ಮಾಡಿದೆ. ಉನ್ನತ ಶಿಕ್ಷಣ ಮಂಡಳಿ ಅಡಿಯಲ್ಲಿ ಬರುವ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುತ್ತದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಎಸ್‌ಹೆಚ್‌ಇಸಿ 23 ನೇ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.