ಪ್ರಧಾನಿ ಮೋದಿ ಸಹೋದರನ ಕಾರು ಮೈಸೂರಿನಲ್ಲಿ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಮೈಸೂರಿನ ಕಡಕೊಳ ಬಳಿ ನಡೆದಿದೆ.


ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿಯವರ ಮಗ ಹಾಗೂ ಸೊಸೆ ಗಾಯಗೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

Also Read  ಕರಾವಳಿ ಮೀನುಗಾರಿಕೆ ➤ ಜೂನ್ 30ರಂದು ಸಭೆ

error: Content is protected !!
Scroll to Top