2023 ಹಬ್ಬ-ಹರಿದಿನ ➤ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಡಿ. 27. ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ‘ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬ ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ಲಭಿಸಲಿದೆ.

ಈ ಕಾರ್ಯಕ್ರಮದಡಿ ಟ್ರಸ್ಟ್, ಸಂಘ ಸಂಸ್ಥೆಗಳು , ಎಸ್‌ಡಿಎಂಸಿಗಳು, ಸಾರ್ವಜನಿಕರೂ ಸೇರಿದಂತೆ ಸಮುದಾಯದವರು ಆರ್ಥಿಕ ನೇರವು, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು. ಈ ರೀತಿ ನೀಡುವ ಆಹಾರ ಸಂಪೂರ್ಣ ಸಸ್ಯಾಹಾರವಾಗಿರಬೇಕು. ಇಲಾಖೆ ಗುರುತಿಸಿರುವ ಆಹಾರ ಪದಾರ್ಥಗಳ ಪಟ್ಟಿಯಲ್ಲಿರಬೇಕು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.

Also Read  ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

ಇದರಿಂದ ಯಾವುದೇ ವರ್ಗ, ಜಾತಿ , ಮತ, ಲಿಂಗ, ಭೇದವಿಲ್ಲದೆ ನಾವೆಲ್ಲರೂ ಒಂದು ಎಂಬ ಏಕತಾ ಭಾವನೆಯನ್ನು ಮಕ್ಕಳಲ್ಲಿ ಬೆಳೆಸುವುದು ಇದರ ಉದ್ದೇಶ. ಸಮುದಾಯದಲ್ಲೂ ಒಗ್ಗಟ್ಟು, ಸಹಬಾಳ್ವೆ, ಬಾಂಧವ್ಯ, ಐಕ್ಯತೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆವಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

error: Content is protected !!
Scroll to Top