ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ

ನ್ಯೂಸ್ ಕಡಬ) newskadaba.com, ನವದೆಹಲಿ.  ಡಿ. 27 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಕೆಲ ಕಾಲ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇನ್​ಸೈಡ್​ಸ್ಪೋರ್ಟ್ಸ್​ ವರದಿ ಮಾಡಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಈ ಎರಡು ಸರಣಿಗಳಲ್ಲಿ ಟೀಮ್ ಇಂಡಿಯಾ ಒಟ್ಟು 6 ಪಂದ್ಯಗಳನ್ನು ಆಡಲಿದ್ದು, ಈ ವೇಳೆ ಕೊಹ್ಲಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

Also Read  ಕುಕ್ಕೆ ಸುಬ್ರಹ್ಮಣ್ಯ : ತಾರಕೇಶ್ವರಿ ಯು.ಎಸ್ ಅವರಿಗೆ ಡಾಕ್ಟರೇಟ್

error: Content is protected !!
Scroll to Top