ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು



(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 27. ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ.







ಮೃತ ಬಾಲಕನನ್ನು ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಈತನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝಾ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.






error: Content is protected !!
Scroll to Top