ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಲಾರಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 28. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆಗುರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top