ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 27 .  ಮಗುವೊಂದು ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ವರದಿಯಾಗಿದೆ.

ಮೃತ ಮಗುವನ್ನು ಅಸ್ಸಾಂ ಮೂಲದ ಅಸ್ಮಾ ಹಾಗು ಇದ್ರಿಸ್ ಅಲಿ ದಂಪತಿ ಪುತ್ರಿ ಅಲಿಝಾ(5) ಎಂದು ಗುರುತಿಸಲಾಗಿದೆ.

ಸಂಜೆ ರಸ್ತೆ ಬದಿ ಆಟವಾಡುತ್ತಿದ್ದಾಗ ಮಗುವಿಗೆ ದ್ವಿಚಕ್ರವಾಹನ ಢಿಕ್ಕಿಯಾಗಿದೆ ಎನ್ನಲಾಗಿದೆ. ಈ ವೇಳೆ ದ್ವಿಚಕ್ರ ವಾಹನ‌ ಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!