ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನಾ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದ್ದ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂದುಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೋಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಹೆಚ್ಚುತ್ತಿರು ಕೊರೋನಾ ಪ್ರಕರಣವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದಲ್ಲದೇ, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶೀ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಕೋವಿಡ್ ದೃಢಪಟ್ಟಲ್ಲಿ ಅಂತಹ ವ್ಯಕ್ತಿಗಳಿಗೆ ಐಸೊಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸನ್ನದ್ದವಾಗಿದೆ.

Also Read  •ಬೆಳ್ತಂಗಡಿ: ಕಳೆದ ವರ್ಷದ ಪ್ರವಾಹ ಸಂದರ್ಭ ಸಂಗ್ರಹವಾದ ಹಣದ ಲೆಕ್ಕ ನೀಡುವಂತೆ ಕಾಂಗ್ರೆಸ್ ಒತ್ತಾಯ - ಹರೀಶ್ ಪೂಂಜಾ ಕಛೇರಿ ಎದುರು ಪ್ರತಿಭಟನೆ

error: Content is protected !!
Scroll to Top