ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ.

ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿ ಪ್ರಧಾನದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಶಪಾಂಡೆ ಅವರಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಗೌರವ ಬಂದಿದೆ. ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಉತ್ತಮ ಕೆಲಸ ಮಾಡಿ ಜನಮನ ಗೆದ್ದಿದ್ದಾರೆ ಎಂದರು.

Also Read  ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

error: Content is protected !!
Scroll to Top