ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅಹಮದಬಾದ್, ಡಿ. 28. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಹಮದಬಾದ್‌ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಹಿರಾಬೆನ್‌ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.

Also Read  ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ

error: Content is protected !!
Scroll to Top