ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಬೇಲೂರು, ಡಿ. 28. ಪ್ರವಾಸಕ್ಕೆಂದು ತೆರಳಿದ್ದ ಸಾರಿಗೆ ಬಸ್ ಗೆ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಹನ್ನೆರಡು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವನಹಳ್ಳಿಯಲ್ಲಿ ನಡೆದಿದೆ.

ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೇಲೂರು ತಾಲೂಕಿನ ಸೂಲದೇವನಹಳ್ಳಿ ಬಳಿಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೊರಟ್ಟಿದ್ದರು. ಈ ವೇಳೆ ಎದುರಿನಿಂದ ಬಂದ ಮಿನಿ ಬಸ್ ವಿದ್ಯಾರ್ಥಿಗಳಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಹಳೇಬೀಡು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Also Read  ಇಂದು ರಾತ್ರಿ ಕಡಬ ಅನುಗ್ರಹ ಸಭಾ ಭವನದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ► ಹಿರಿಯ ಉದ್ಯಮಿ ಸಿ.ಫಿಲಿಪ್ ರವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

error: Content is protected !!
Scroll to Top