ದ.ಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪತ್ತೆ…!! ➤ ವಿದೇಶದಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿದ್ದು, ಈ ಮೂಲಕ ದ.ಕ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.


ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್‌ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿತ್ತು. ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಯಾವುದೇ ಗುಣಲಕ್ಷಣ ಹೊಂದಿರದ ಕಾರಣ ಅವರನ್ನು ಮಂಗಳೂರಿನ ಅವರ ಮನೆಯಲ್ಲಿ ಗೃಹ ನಿಗಾವಣೆಯಲ್ಲಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Also Read  ಕುಡಿತದ ಮತ್ತಿನಲ್ಲಿ ಜಗಳ ನಡೆದು ಮಗನನ್ನೇ ಕೊಂದ ತಂದೆ...! ➤ ಆರೋಪಿ ಅರೆಸ್ಟ್

error: Content is protected !!
Scroll to Top