ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ



(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.





ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ‌ಆದರಿಂದ ರಾಜ್ಯದಲ್ಲಿ ಹೊಸ 2500 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ, ಹಾಗೂ ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.‌ ಡಿವೈಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.






error: Content is protected !!
Scroll to Top