ಮೊದಲ ಬಾರಿಗೆ ದತ್ತಪೀಠದಲ್ಲಿ ಮುಡಿ ಕಾರ್ಯಕ್ರಮ ನರವೇರಿಸಿದ ಗಂಗಾಧರ್ ಕುಲಕರ್ಣಿ..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 28. ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿಯವರು ದತ್ತಪೀಠದಲ್ಲಿ ಮುಡಿ ಕೊಟ್ಟಿದ್ದಾರೆ. ಈ ಮೂಲಕ ಇತಿಹಾಸದಲ್ಲಿ ಮೊದಲ ಬಾರಿಗೆ ದತ್ತಪೀಠದಲ್ಲಿ ಮುಡಿ ಕಾರ್ಯಕ್ರಮ ನಡೆಯಿತು.

ಕುಲಕರ್ಣಿಯವರು ಅರ್ಚಕರ ನೇಮಕ ಹಾಗೂ ಮೂರ್ತಿ ಮೆರವಣಿಗೆಗೆ ಹರಕೆ ಹೊತ್ತಿದ್ದರು. ಹೀಗಾಗಿ ಕಳೆದ ನಾಲ್ಕು ವರ್ಷದಿಂದ ಅವರು ಕ್ಷೌರ ಮಾಡಿಸಿರಲಿಲ್ಲ. ಸದ್ಯ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾದ ಹಿನ್ನೆಲೆಯಲ್ಲಿ ದತ್ತಪೀಠದಲ್ಲೇ ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ಈ ಸಂದರ್ಭ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು.

Also Read  ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ

error: Content is protected !!