ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸಾಗರ, ಡಿ. 28.  ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬುಧವಾರದಂದು ಶಿವಮೊಗ್ಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದ ಪ್ರತಿಮಾ (18) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಹಾಗೂ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದವು. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಇದೀಗ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆ ಕಾಲೇಜಿಗೆ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  'ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ'- ಕೇಂದ್ರ ಸಚಿವ ಚೌಹಾಣ್

 

error: Content is protected !!
Scroll to Top