(ನ್ಯೂಸ್ ಕಡಬ) newskadaba.com ಕಡಬ, ಡಿ.03. ಪಾದಚಾರಿ ವ್ಯಕ್ತಿಯೋರ್ವರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ಕೈಕಂಬ ಎಂಬಲ್ಲಿ ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೈಕಂಬ ಸರಕಾರಿ ಶಾಲೆಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಗಾಯಾಳುವನ್ನು ಪಿಕಪ್ ವಾಹನದ ಮೂಲಕ ಕರೆದುಕೊಂಡು ಬಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಾಳುವಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.