ಇಂದಿನಿಂದ ರಾಜ್ಯ ಹೈಕೋರ್ಟ್ ನ ಮುಖ್ಯ ನಾಯ್ಯಮೂರ್ತಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಇಂದಿನಿಂದ (ಡಿ.29) ದಕ್ಷಿಣ ಕನ್ನಡ ಹಾಗೂ ಉಡುಪಿ ಜಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಡಿ.29ರ ಸಂಜೆ 5.55ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಹೂಡುವರು. ಡಿ.30ರ ಶುಕ್ರವಾರ ಬೆಳಿಗ್ಗೆ 9ಕ್ಕೆ ಮಂಗಳೂರಿನಿಂದ ಉಡುಪಿಗೆ ತೆರಳಿ, ಸಂಜೆ 4.30ಕ್ಕೆ ಉಡುಪಿಯಿಂದ ಮೂಡಬಿದಿರೆಗೆ ಆಗಮಿಸಿ, ಅಲ್ಲಿ ನೂತನವಾಗಿ ನಿರ್ಮಿಸಲಾದ ಬಾರ್ ಅಸೋಸಿಯೇಷನ್ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುವರು. ರಾತ್ರಿ 10.15ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!   

error: Content is protected !!
Scroll to Top