ಮೀನುಗಾರರ, ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. 2022- 23ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮದಡಿ ಮೀನುಗಾರರ ಹಾಗೂ ಮೀನು ಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುವುದು. ಪಿ.ಯು.ಸಿ ಮತ್ತು ನಂತರದ ಕೋರ್ಸ್‍ಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ‘ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ ಯೋಜನೆಯಡಿ’ ವಿದ್ಯಾರ್ಥಿವೇತನ ಪಡೆಯಲು ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್‍ ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬಹುದು. ಅರ್ಹರು ಸೌಲಭ್ಯ ಪಡೆಯುವಂತೆ ಜಿಲ್ಲಾ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top